ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ 2022 2023 ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ವಿಶೇಷ ಗೌರವಧನಗಳನ್ನು ನೀಡಲು ಮುಂದಾಗಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವಧನವನ್ನು ಕಳೆದ ಆರು ವರ್ಷಗಳಿಂದ ಪರಿಷ್ಕರಿಸಿರುವುದಿಲ್ಲ. ಅತಿಥಿ ಶಿಕ್ಷಕರುಗಳಿಗೆ ನೀಡಲಾಗುವ ಗೌರವ ಸಂಭಾವನೆಯನ್ನು ಪರಿಷ್ಕರಿಸುವ ಅವಶ್ಯಕತೆ ಇರುವುದರಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರುಗಳಿಗೆ ಮಾಸಿಕ ರೂ 10,000/- ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಗೆ ಮಾಸಿಕ 10,500/- ದಂತೆ ನೀಡಲು ಸರ್ಕಾರ ನಿರ್ಧರಿಸಿದೆ.