ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಧರ್ಮದಾಯ ದತ್ತಿ ಇಲಾಖೆಯ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯಿತು.
47 ಜೋಡಿಗಳು ಸರಳ ವಿವಾಹದಲ್ಲಿ ಹಸೆಮನೆ ಏರಿದ್ದಾರೆ. ಈ ಸಂದರ್ಭದಲ್ಲಿ ಮಹರ್ಷಿ ಆನಂದ ಗುರೂಜಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ದೊಡ್ಡಬಳ್ಳಾಪುರ ಶಾಸಕರಾದ ವೆಂಕಟರಮಣಯ್ಯ, ದೇವನಹಳ್ಳಿ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣ ಹಾಗೂ ಇತರರು ಪಾಲ್ಗೊಂಡಿದ್ದರು.