ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ.

ಕಾಮಗಾರಿ ನಡೆಯುವ ಸ್ಥಳಗಳಲ್ಲೇ ಪಾರ್ಕಿಂಗ್, ಇವರಿಗಿಲ್ಲ ಕಾನೂನಿನ ಭಯವೂ ಇಲ್ಲ, ಸಾಮಾನ್ಯ ಜ್ಞಾನವೂ ಇಲ್ಲ!!!!

ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ವಾಹನದವರಿಗೆ ತಟ್ಟುತ್ತಿಲ್ಲ ಯಾವುದೇ ಬಿಸಿ, ಇಂತಹವರಿಗೆಲ್ಲ ಕಾನೂನಿನ ಬಿಸಿ ಮುಟ್ಟಿಸಿದರೆ ಎಲ್ಲಾ ಸರಿಹೋಗುವ ಸಾಧ್ಯತೆ ಇದೆ ಇದಲ್ಲದೆ ಶಿಳ್ಳೆ ಹಾಕಿ ಬೊಬ್ಬೆ ಹೊಡೆದರೆ ನಾಳೆ ಬೆಳಗ್ಗೆ ಆದರೂ ಯಾವುದೇ ಬ್ಲಾಕ್ ಕ್ಲಿಯರ್ ಆಗಲಿಕ್ಕಿಲ್ಲ, ಪಾಪದವ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿರೆ ಅಡ್ಡ ಬರುವ ಲಾಟಿ ಇಂದು ಎಲ್ಲಿ ಮರೆಯಾಯಿತು.?? ವಾಹನ ದಟ್ಟಣೆ ಇರುವ ಈ ಸಂದರ್ಭದಲ್ಲಿ ಹಗಲು ವೇಳೆ ರಸ್ತೆ ಅಗೆದು ಗುಂಡಿ ತೋಡಿ ಈ ಬಿಸಿಲ ಝಳಕ್ಕೆ ಮೈಯೊಡ್ಡುವಂತೆ ಮಾಡುತ್ತಿರುವ ಅರೆಬರೆ ಕಾಮಗಾರಿಯೇ ಈ ಸಮಸ್ಯೆಗೆ ಮೂಲ‌ ಕಾರಣವಾಗಿದೆ. ಹೆಚ್ಚಿನ ಜನಸಂದಣಿ, ವಾಹನ ಸಂಖ್ಯೆ ‌ಇರುವಲ್ಲಿಯೇ ಈ ರೀತಿ ಕಾಮಗಾರಿ ಕುಂಟುತ್ತಿದ್ದರೆ ಮುಂದಿನ ಎರಡು ವರ್ಷ ಕಳೆದರೂ ಪೂರ್ಣವಾಗದು ಎಂದು ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಿದರೆ ಕೇಸು ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅದಲ್ಲದೇ ಇವತ್ತು ಎಲ್ಲೆಡೆ ಮದುವೆ, ಗೃಹಪ್ರವೇಶ ಸೇರಿದಂತೆ ಇನ್ನಿತರ ಭಾರೀ ಕಾರ್ಯಕ್ರಮಗಳು ಇದ್ದುದರಿಂದ ವಿಪರೀತ ವಾಹನ ದಟ್ಟನೆಯೂ ಕಂಡುಬಂದಿದ್ದು ಗುರುವಾಯನಕೆರೆ ಸೇರಿದಂತೆ ಇತರೆಡೆಯಲ್ಲಿಯೂ ಟ್ರಾಫಿಕ ಜಾಮ್ ಉಂಟಾಗಿದೆ.

ಈ ನಡುವೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ತತ್ತರಿಸುವ ಸ್ಥಿತಿ ನಿರ್ಮಾಣವಾಗಿದೆ.

ಇವತ್ತು ವಿಪರೀತ ಕಾರ್ಯಕ್ರಮಗಳ ಒತ್ತಡದಲ್ಲಿ ಇರುವಾಗ ವಾಹನ ಸಂಚಾರಕ್ಕೆ ಸಮರ್ಪಕ ವ್ಯವಸ್ಥೆಯನ್ನು ಕಾಮಗಾರಿ ನಡೆಸುವ ಗುತ್ತಿಗೆದಾರರು ಮಾಡದೇ ಈ ಬಿಸಿಲಿನಲ್ಲಿ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ ಮಾಡಿರುವುದರಿಂದ ಹಲವಾರೂ ಕಾರ್ಯಕ್ರಮಗಳಿಗೆ ತೆರಳುವವರಿಗೆ ತುಂಬಾ ತೊಂದರೆಯಾಗಿದೆ.

ಅದಲ್ಲದೇ ಕಾಮಗಾರಿ ನಡೆಯುತ್ತಿರುವ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡಿರುವುದರಿಂದಲೂ ಒಂದಷ್ಟು ಸಂಚಾರಕ್ಕೆ ಇಕ್ಕಟ್ಟಾದ ಸ್ಥಿತಿ ನಿರ್ಮಾಣವಾಗಿದ್ದು, ಟ್ರಾಫಿಕ್ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆಯೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ