“ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

ಬೆಂಗಳೂರು, ಜೂನ್ 18: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರ ಗಿರೀಶ್‌ ಮಟ್ಟೆಣ್ಣನವರ್‌ಗೆ ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ.

ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಟೀಕೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳ ವಿರುದ್ಧ ಕೆಸರೆರಚಾಟ ನಡೆಸುವುದು ಅಥವಾ ಸಾರ್ವಜನಿಕವಾಗಿ ತೇಜೋವಧೆ ಮಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇರೆಗೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಗಿರೀಶ್‌ ಮಟ್ಟೆಣ್ಣನವರ್‌ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ನ್ಯಾಯಪೀಠವು ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಬೇಜವಾಬ್ದಾರಿಯುತ ಪ್ರವೃತ್ತಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದು, ಮುಂದಿನ ವಿಚಾರಣೆಯೊಳಗೆ ಇಂತಹ ಚಟುವಟಿಕೆಗಳನ್ನು ಕೈಬಿಡುವುದಾಗಿ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ಪರ ವಕೀಲರು ಪ್ರಕರಣದಲ್ಲಿ ಸಾರ್ವಜನಿಕ ಶಾಂತಿ ಭಂಗ ಅಥವಾ ಗಲಭೆಗೆ ಕಾರಣವಾದ ಯಾವುದೇ ನಿರ್ದಿಷ್ಟ ಘಟನೆ ಉಲ್ಲೇಖಗೊಂಡಿಲ್ಲ ಎಂದು ವಾದಿಸಿದರೆ, ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಇಂತಹ ಪೋಸ್ಟ್‌ಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯದ ಗಮನ ಸೆಳೆದರು.

ಈ ವೇಳೆ ನ್ಯಾಯಪೀಠ, “ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ವಿಮರ್ಶೆ ಮಾಡಿ. ಆದರೆ ಯಾರ ಮೇಲಾದರೂ ಅವಹೇಳನಕಾರಿ ರೀತಿಯಲ್ಲಿ ಕೆಸರೆರಚಾಟ ನಡೆಸುವುದು ಸರಿಯಲ್ಲ. ಆರೋಗ್ಯಕರ ವಿಮರ್ಶೆ ಸ್ವಾಗತಾರ್ಹವಾದರೂ ನಿಂದನಾತ್ಮಕ ವರ್ತನೆಗೆ ಅವಕಾಶವಿಲ್ಲ” ಎಂದು ಕಟುವಾಗಿ ಹೇಳಿತು.

ಪ್ರಕರಣದ ಹಿನ್ನೆಲೆ

ಧರ್ಮಸ್ಥಳದ ನಿವಾಸಿ ಜಿ. ಸುಬ್ರಹ್ಮಣ್ಯ ಪ್ರಸಾದ್‌ ಅವರು ನೀಡಿದ ದೂರಿನ ಆಧಾರದ ಮೇಲೆ, ಗಿರೀಶ್‌ ಮಟ್ಟೆಣ್ಣನವರ್‌ ಸಾಮಾಜಿಕ ಜಾಲತಾಣದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

ಈ ದೂರಿನ ಆಧಾರದಲ್ಲಿ ಗಿರೀಶ್‌ ಮಟ್ಟೆಣ್ಣನವರ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 353(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 10 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 10 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ