ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ.
ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಸ್ವಾಮೀಜಿ ಅವರು 1965 ರಲ್ಲಿ ಮಠದ ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಇಂದು ಸಿದ್ದರಾಮ ಸ್ವಾಮೀಜಿಗಳಿಗೆ ಹೃದಯಾಘಾತವಾಗಿದ್ದು, ಮಠದಲ್ಲಿಯೇ ಸ್ವಾಮೀಜಿಗಳು ಕೊನೆಯುಸಿರೆಳೆದಿದ್ದಾರೆ. ನಾಳೆ ಸ್ವಾಮೀಜಿಗಳ ಕ್ರಿಯಾ ಸಮಾಧಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.