ಗ್ರೀನ್ ಪಟಾಕಿ ಮಾರಾಟಕ್ಕೆ ಸರಕಾರದ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟ ಹಾಗೂ ಮಾರಾಟಕ್ಕೆ ಲೈಸೆನ್ಸ್ ಪಡೆಯೋದಕ್ಕೆ ಇಂದಿನಿಂದ ಆರಂಭವಾಗಲಿದೆ.

ಇನ್ನೂ ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಬೆಂಗಳೂರಿನ 60 ಮೈದಾನಗಳಲ್ಲಿ ಮಾತ್ರವೇ ಹಸಿರು ಪಟಾಕಿ ಮಾರಾಟಕ್ಕೆ ಸೂಚಿಸಿರುವ ಸರ್ಕಾರ, ಸಿಲಿಕಾನ್ ಸಿಟಿಯಲ್ಲಿ 458 ಹಸಿರು ಪಟಾಕಿ ಮಾರಾಟ ಮಳಿಗೆ ತೆರೆಯಲು ಲೈಸೆನ್ಸ್ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರ ಸೂಚಿಸಿದೆ.

ಹಸಿರು ಪಟಾಕಿ ಮಾರಾಟ ಮಾಡುವಾಗ, ಖರೀದಿಸುವಾಗ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಪಟಾಕಿಯ ಬಾಕ್ಸ್ ಮೇಲೆ ಕಡ್ಡಾಯವಾಗಿ ಗ್ರೀನ್ ಫೈರ್ ಬಾಕ್ಸ್ ಎಂಬುದಾಗಿ ಮುದ್ರೆಯಿರಬೇಕು ಎಂಬುದಾಗಿಯೂ ತಿಳಿಸಿದೆ. ಈ ಮೂಲಕ ಇಂದಿನಿಂದ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಲೈಸೆನ್ಸ್ ಆರಂಭವಾಗಿದೆ. ಹಸಿರು ಪಟಾಕಿಯನ್ನಷ್ಟೇ ಮಾರಾಟ ಮಾಡಬೇಕು. 5 ದಿನ ಪಟಾಕಿ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ