
ಗಾಂಧೀನಗರ: ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್ ಸೇತುವೆ (Cable Bridge Collapse) ಕುಸಿದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ.

ಗುಜರಾತ್‌ನ ಮೊರ್ಬಿ (Morbi) ಪ್ರದೇಶದ ಮಚ್ಚು ನದಿಗೆ ನಿರ್ಮಿಸಿದ್ದ ಕೇಬಲ್ ಸೇತುವೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ತಕ್ಷಣ ಅಂಬುಲೆನ್ಸ್‌ಗಳು ಸ್ಥಳಕ್ಕೆ ಬಂದಿವೆ. ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ.
ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದರ್ ಪಟೇಲ್ ಹೇಳಿದ್ದಾರೆ.
ಮೋರ್ಬಿಯಲ್ಲಿ ತೂಗು ಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ವ್ಯವಸ್ಥೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.