ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ!

ಗುಜರಾತ್‍: ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ರವರು ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು.

ಬಿಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ತಮ್ಮ ನಿಲುವು ಸೂಚಿಸಿದರು. ಆ ಬಳಿಕ ಇತರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಬಿಎಲ್ ಪಿ ಸಭೆಯ ನಂತರ ಬಿಜೆಪಿ ಹಿರಿಯ ನಾಯಕರು ಮಹತ್ವದ ಸಭೆ ನಡೆಸಿದರು. ಆ ಬಳಿಕ ನೂತನ ಸಿಎಂ ಹೆಸರನ್ನು ಪ್ರಕಟಿಸಲಾಯಿತು.

ರೂಪಾಣಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿದ್ದರು.

READ ALSO