ಸರಕಾರಿ ನೌಕರರು ಇನ್ಮುಂದೆ ಕಡ್ಡಾಯವಾಗಿ ಬಳಸಬೇಕಿದೆ ಎಲೆಕ್ಟ್ರಿಕ್ ವಾಹನ! ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅವಶ್ಯಕ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೇಶದಲ್ಲಿ ತೈಲೋತ್ಪನ್ನಗಳ ದರಗಳು ನಿತ್ಯ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿಸುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ದೆಹಲಿಯಲ್ಲಿರುವ ಎಲ್ಲ ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ ಮಾಡಲಾಗುವುದು ಎಂದು ಹೇಳಿದ್ದಾರೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಸಚಿವ ಗಡ್ಕರಿ, ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆ್ಚ್ಚಾಗಬೇಕು. ಈ ಅಭಿಯಾನವನ್ನು ತಮ್ಮ ಇಲಾಖೆಯಿಂದಲೇ ಆರಂಭಿಸುವುದಾಗಿ ಹೇಳಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಂತೆಯೇ ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರಿಗೆ ಸಲಹೆ ನೀಡಿದ ನಿತಿನ್ ಗಡ್ಕರಿ, ತಮ್ಮ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ, ‘ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವಂತೆ ಅವರು ಸಲಹೆ ನೀಡಿದರು. ಒಂದು ಲೆಕ್ಕಾಚಾರದ ಪ್ರಕಾರ, ದೆಹಲಿಯಲ್ಲಿ 10,000 ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಸುಮಾರು 30 ಕೋಟಿ ರೂಪಾಯಿಯಷ್ಟು ಉಳಿತಾಯವಾಗಬಹುದು. ಎಲೆಕ್ಟ್ರಿಕ್ ಅಡುಗೆ ಉಪಕರಣಗಳನ್ನು ಬಳಸುವುದರಿಂದ ಆಮದು ಮಾಡಿದ ಅಡುಗೆ ಅನಿಲ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಬಹುದು ಎಂದು ಹೇಳಿದರು.

ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಚಿವರು ಸಲಹೆ ನೀಡಿದರು. ಅಂತೆಯೇ ನಾವು ವಿದ್ಯುತ್ ಉಪಕರಣಗಳಿಗೆ ಏಕೆ ಸಬ್ಸಿಡಿ ಕೊಡಬಾರದು? ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ