ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ ಕೊನೆಗೂ ಸುಖ್ಯಾಂತ್ಯ ಗೊಂಡಿದೆ. ಮುಷ್ಕರ ನಿರತ ಸಾರಿಗೆ ನೌಕರರ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.
ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಸಾರಿಗೆ ನೌಕರರು ತಮ್ಮ ಮುಷ್ಕರ ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ. 2020 ಜನವಯಿಂದ ವೇತನ ಪರಿಷ್ಕರಣೆ, ನೌಕರರಿಗೆ ಕಿರುಕುಳ ತಡೆಯುವುದು, ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 30 ಲಕ್ಷ ಪರಿಹಾರ ಸೇರಿದಂತೆ ಸಮಿತಿ ವರದಿ, ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಆದರೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬುದನ್ನು ಸಭೆಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.