ಭಟ್ಕಳದ ಹಾಡುವಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೋಲೆ

READ ALSO

ಭಟ್ಕಳ: ಒಂದೇ‌ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು (65), ಅವರ ಪತ್ನಿ ಮಾದೇವಿ (60), ಪುತ್ರ ರಾಜೀವ್ (34) ಹಾಗೂ ಸೊಸೆ ಕುಸುಮಾ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.