ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ