ಶಿಕ್ಷಕರ ಹಾಗೂ ಸರ್ಕಾರಿ ಶಾಲೆಗಳ ವಿವಿಧ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಹರೀಶ್ ಪೂಂಜಾ

ಬೆಳಗಾವಿ: ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸುವಂತೆ ಮಾನ್ಯ ಶಿಕ್ಷಣ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದರು ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ ಎಲ್ ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಹಾಗೂ ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡುವಂತೆಯೂ , ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆ ಹಾಗೂ ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೊರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದರು.

Spread the love
  • Related Posts

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಿಲ್ಲೂರು,ರಾಗಿಕುಮೇರ್ ಮನೆ ನಿವಾಸಿ ಕೊರಗಪ್ಪ ಮತ್ತು ಲಲಿತಾ ದಂಪತಿಗಳ ಮೊದಲ ಪುತ್ರ ಶಶಿರಾಜ್ ಪೂಜಾರಿ (34) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

    Spread the love

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    You Missed

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 30 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 27 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 27 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 35 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 90 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ