ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 4 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 3 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ