
ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.
ಈ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ವಿಚಾರಿಸಲು ಮಾಜಿ ಸಚಿವ ಹೆಚ್,ಡಿ ರೇವಣ್ಣ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದಾರೆ.