ಹಾಸನ: ಫ್ಲಿಕಿಂಗ್ ಮೆಷಿನ್ ತಗುಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಹಾಸನ ಹೊರವಲಯದ ಕೆ.ಐ.ಎ.ಡಿ.ಬಿ. ಏರಿಯಾದಲ್ಲಿರುವ ಶಾಹಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಘಟನೆ ಸಂಭವಿಸಿದೆ.
ಹೊಳೆನರಸೀಪುರ ತಾಲ್ಲೂಕಿನ ದೊಡ್ಡಬ್ಯಾಗತವಳ್ಳಿ ಗ್ರಾಮದ ಶಿಲ್ಪಾ ಡಿ.ಎಸ್. (20) ಮೃತಪಟ್ಟ ಯುವತಿ.
ಎರಡು ವರ್ಷಗಳಿಂದ ಶಾಹಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ಅವರಿಗೆ ಕೆಲಸ ಮಾಡುವಾಗ ಹೊಟ್ಟೆಗೆ ಪ್ಲೀಕಿಂಗ್ ಮೆಷಿನ್ ತಗುಲಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಶಿಲ್ಪ ಶುಕ್ರವಾರ ರಾತ್ರಿ ಮೃತಪಟ್ಟಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.