ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೈವ ನರ್ತಕರಿಗೆ , ಸಹಾಯಕರಿಗೆ , ಸೇವಕರ ಕುಟುಂಬಕ್ಕೆ ಆಗತ್ಯ ಆಹಾರ ವಸ್ತುಗಳ ವಿತರಣೆ

ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ.

ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ.

ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 KG ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೋನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ.

ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಇವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ