ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಈ ಹಿಂದೆ ಹೆಚ್ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ಸದ್ಯ ಸೋಂಕಿನಿಂದ ರೇವಣ್ಣ ಚೇತರಿಸಿಕೊಂಡಿದ್ದಾರೆ. ಆದ್ರೆ ಈಗ 87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ತಗುಲಿದೆ. ಹೆಚ್ಡಿಡಿ ಕುಟುಂಬದಲ್ಲಿ ಆತಂಕ ಹೆಚ್ಚಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದೆ. ದೇವೇಗೌಡ ದಂಪತಿ ಇಬ್ಬರು ಆರೋಗ್ಯವಾಗಿದ್ದಾರೆ. ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಮಾಹಿತಿ ನೀಡಬೇಕಿದೆ.