TRENDING
Next
Prev

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ಪಾಸಿಟಿವ್!

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಈ ಹಿಂದೆ ಹೆಚ್​ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ಸದ್ಯ ಸೋಂಕಿನಿಂದ ರೇವಣ್ಣ ಚೇತರಿಸಿಕೊಂಡಿದ್ದಾರೆ. ಆದ್ರೆ ಈಗ 87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ತಗುಲಿದೆ. ಹೆಚ್​ಡಿಡಿ ಕುಟುಂಬದಲ್ಲಿ ಆತಂಕ ಹೆಚ್ಚಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದೆ. ದೇವೇಗೌಡ ದಂಪತಿ ಇಬ್ಬರು ಆರೋಗ್ಯವಾಗಿದ್ದಾರೆ. ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಮಾಹಿತಿ ನೀಡಬೇಕಿದೆ.

READ ALSO