ಗಡಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆದ ಮೋದಿ ನಿರ್ಧಾರಕ್ಕೆ ಮಾಜಿ ಪ್ರಧಾನಿ HDD ಮೆಚ್ಚುಗೆ

ಬೆಂಗಳೂರು: ಲಡಾಖ್​ನ ಗಾಲ್ವನ್​​​ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್​ ಮಾಡಿದ್ದಾರೆ.

ಕಳೆದ ಸೋಮವಾರ ರಾತ್ರಿ ಉಭಯ ದೇಶದ ಸೈನಿಕರ ನಡುವಿನ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರಲ್ಲಿ ಮುಂದಿನ ಕ್ರಮಗಳ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ.

ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ಉಭಯ ದೇಶಗಳ ನಡುವೆ ಈಗಾಗಲೇ ಹಲವು ಸುತ್ತುಗಳ ಮಾತುಕತೆ ನಡೆದಿದೆ. ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಘರ್ಷಣೆಯ ಬಗ್ಗೆ ಮಾಹಿತಿ ಹಂಚಿಕೊಂಡಾಗ ಮಾತ್ರ ವಿಪಕ್ಷಗಳು ತಮ್ಮ ಅಭಿಪ್ರಾಯ ತಿಳಿಸಲು ಸಾಧ್ಯ. ನಮಗೆ ಕೇವಲ ಮಾಧ್ಯಮಗಳ ಮೂಲಕ ವಿಚಾರಗಳು ತಿಳಿಯುತ್ತಿದೆ. ಅದನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ವಿಪಕ್ಷಗಳಲ್ಲೂ ಮನವಿ ಮಾಡಿಕೊಂಡಿರುವ ದೇವೇಗೌಡರು, ಭಾರತ-ಚೀನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಸಂಯಮದಿಂದ ವರ್ತಿಸಬೇಕಾದ ಸ್ಥಿತಿಯಿದೆ. ರಾಷ್ಟ್ರೀಯ ಭದ್ರತೆ ಹಿತದೃಷ್ಠಿಯಿಂದ ಸರ್ಕಾರಕ್ಕೆ ನಾವು ಸಹಕಾರ ನೀಡಬೇಕು. ಆದರೆ ಸರ್ಕಾರವನ್ನು ಪ್ರಶ್ನೆ ಮಾಡುವ ಹಕ್ಕು ನಿಮಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಭಾರತೀಯ ಸೇನೆಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿರುವುದು ಅಪಾಯಕಾರಿ ಎಂದು ದೇವೇಗೌಡರು ಎಚ್ಚರಿಸಿದ್ದಾರೆ

Spread the love
  • Related Posts

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

    Spread the love

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲಪಲ್ಕೆ ಎಂಬಲ್ಲಿ ಹಾಲು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಡಿಡುಪೆ ಕುಕ್ಕಾವು ಕಡೆಯಿಂದ ಹಾಲು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಸುಮಾರು 5000ಲೀಟರ್ ಗಿಂತಲೂ ಹೆಚ್ಚು…

    Spread the love

    You Missed

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    • By admin
    • November 3, 2024
    • 82 views
    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    • By admin
    • October 31, 2024
    • 78 views
    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    • By admin
    • October 30, 2024
    • 51 views
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    • By admin
    • October 26, 2024
    • 53 views
    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

    • By admin
    • October 26, 2024
    • 47 views
    ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

    ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

    • By admin
    • October 23, 2024
    • 94 views
    ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ  ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ