ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಹೆಚ್‌ಡಿ ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹೆಚ್‌ಡಿ ಕುಮಾರಸ್ವಾಮಿಗೆ ಯಾವ ಖಾತೆ ನೀಡಲಾಗುತ್ತದೆ ಅನ್ನೋ ಕುರಿತು ಭಾರಿ ಚರ್ಚೆಗಳು ನಡೆಯುತ್ತಿದೆ. ಈ ಪೈಕಿ ಕೃಷಿ ಖಾತೆ ನೀಡಲಾಗುತ್ತದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಎನ್‌ಡಿಎ ಮೈತ್ರಿ ಸರ್ಕಾರದಲ್ಲಿ ಹೆಚ್‌ಡಿ ಕುಮಾರಸ್ವಾಮಿಗೆ ಪ್ರಮುಖ ಖಾತೆ ನೀಡುವ ಸಾಧ್ಯತೆ ಹೆಚ್ಚಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿತ್ತು. 3 ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸಿತ್ತು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮುಗ್ಗರಿಸಿದ ಜೆಡಿಎಸ್, ಮಂಡ್ಯ ಹಾಗೂ ಕೋಲಾರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು. ಮಂಡ್ಯದಿಂದ ಸಂಸದರಾಗಿ ಆಯ್ಕೆಯಾದ ಕುಮಾರಸ್ವಾಮಿಗೆ ಮೋದಿ ಮೂರನೇ ಅವಧಿಯ ಸರ್ಕಾರದಲ್ಲಿ ಮಂತ್ರಿಗಿರಿ ನೀಡಲಾಗಿದೆ. ಶೀಘ್ರದಲ್ಲೇ ಖಾತೆ ಹಂಚಿಕೆ ನಡೆಯಲಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಗೈರಾಗಿದ್ದಾರೆ. ಆರೋಗ್ಯದ ಕಾರಣ ದೇವೇಗೌಡರು ದೆಹಲಿಗೆ ತೆರಳಿಲ್ಲ. ಈ ಕುರಿತು ಮೋದಿಗೆ ಪತ್ರ ಬರೆದಿರುವ ದೇವೇಗೌಡರು, ಅಭಿನಂದನೆ ತಿಳಿಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ