ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ

ಪೋರ್ ಬಂದರ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಗುಜರಾತ್‌ನ ಪೋರ್‌ ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಈ ಘಟನೆಯಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಐಸಿಜಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಮಧ್ಯಾಹ್ನ 12:10 ರ ಸುಮಾರಿಗೆ ನಡೆದಿದೆ ಎಂದು ಪೋರಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಾಗೀರಥ್‌ಸಿನ್ಹ ಜಡೇಜಾ ತಿಳಿಸಿದ್ದಾರೆ.

ಮೂವರು ಸಿಬ್ಬಂದಿ ಇದ್ದ ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ ಎಂದು ಅವರು ಹೇಳಿದರು.

ಮೂವರು ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ಕರೆತಂದು ಪೋರಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರವಾಗಿ ಸುಟ್ಟ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕಮಲಾ ಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್ ಕಾನ್ಮಿಯಾ ತಿಳಿಸಿದ್ದಾರೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್