ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

ಬಂಟ್ವಾಳ: ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆ ಯಾಗಬೇಕೆಂದು ಆಗ್ರಹಿಸಿ ಬಿಸಿ ರೋಡ್ ನಲ್ಲಿ ಗುರುವಾರ ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು.

ಬಂಟ್ವಾಳದ ಹಿರಿಯ ವಕೀಲರು ಹಾಗೂ ವಕೀಲರ ಸಂಘ (ರಿ), ಬಂಟ್ವಾಳದ ಮಾಜಿ ಅಧ್ಯಕ್ಷರು ಆದ ಪಿ ಜಯರಾಮ್ ರೈ ಅವರು ಪೋಸ್ಟ್ ಕಾರ್ಡ್ ಚಳಿವಳಿಗೆ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷರು ಶ್ರೀ ರಿಚರ್ಡ್ ಕೊಸ್ತಾ ಎಂ ರವರು ಪೋಸ್ಟ್ ಕಾರ್ಡ್ ಚಳವಳಿಯನ್ನು ಉದ್ದೇಶಿಸಿ ಮಾತನಾಡುತ್ತಾ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಂಗಳೂರು, ಜಿಲ್ಲೆಗಳಿಗೆ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ರಚನೆಯಾಗ ಬೇಕೆಂಬುದು ಎರಡು ದಶಕಗಳ ಹಿಂದೆ ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಪಿ. ಚಂಗಪ್ಪರವರ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿದ್ದು, ಪ್ರಸ್ತುತ ಒಂದುವರೆ ವರ್ಷಗಳಿಂದ ಮಂಗಳೂರಿನ ಈಗಿನ ಅಧ್ಯಕ್ಷರಾದ H V ರಾಘವೇಂದ್ರ ರವರ ನೇತೃತ್ವ ದಲ್ಲಿ ಇದಕ್ಕೆ ಮತ್ತೆ ವೇಗ ಸಿಕ್ಕಿದ್ದು, ಅದರ ಮುಂದುವರಿದ ಹೋರಾಟದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಇಂದು ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಎಲ್ಲಾ ವಕೀಲರ ಸಂಘಗಳ ಸಹಯೋಗದಲ್ಲಿ ಏಕ ಕಾಲದಲ್ಲಿ ನಡೆಯುತ್ತಿದೆ.
ಹೈ ಕೋರ್ಟ್ ಪೀಠ ರಚನೆಗೆ ಮಂಗಳೂರಿನಲ್ಲಿ ಜಾಗ ಗುರುತಿಸಿದ್ದು, ಸರಕಾರ ಮತ್ತು ರಾಜ್ಯಪಾಲರಿಗೆ ಒತ್ತಾಯಿಸುವ ನಿಟ್ಟಿನಲ್ಲಿ ಅಭಿಯಾನ ಮತ್ತು ಹೋರಾಟಗಳು ಪ್ರಾರಂಭವಾಗಿದ್ದು, ಈ ಹೋರಾಟಕ್ಕೆ ಎಲ್ಲಾ ಸಂಘ ಸಂಸ್ಥೆ ಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಕಿರಿಯ ವಕೀಲ ಮಿತ್ರರು, ಸಾರ್ವಜನಿಕರು, ಪೋಸ್ಟ್ ಕಾರ್ಡ್ ಅಭಿಯಾನ ದಲ್ಲಿ ಭಾಗವಹಿಸಿದರು.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 17 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 37 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ