ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ನಾಳೆಯಿಂದ ಚಂದನ ವಾಹಿನಿಯಲ್ಲಿ 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ‘ಸೇತುಬಂಧ’ ಪ್ರಸಾರವಾಗಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಕೋವಿಡ್-19 ಪಿಡುಗಿನಿಂದಾಗಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಇನ್ನೂ ಪ್ರಾರಂಭವಾಗದಿರುವ ಹಿನ್ನಲೆಯಲ್ಲಿ 8 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ದೂರದರ್ಶನ ಚಂದನ ವಾಹಿನಿಯಲ್ಲಿ ವೀಡಿಯೋ ಪಾಠಗಳನ್ನು ದಿನಾಂಕ 20-07-2020ರಿಂದ ಪ್ರಸಾರ ಮಾಡಲಾಗುತ್ತಿದೆ.

ವಿದ್ಯಾರ್ಥಿಗಳು ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಶಿಕ್ಷಕರುಗಳು ವಹಿಸಬೇಕಾದ ಕ್ರಮಗಳ ಕುರಿತು ಪ್ರತ್ಯೇಕವಾಗಿ ಸುತ್ತೋಲೆ ಹೊರಿಡಸಲಾಗುವುದು . ವಿದ್ಯಾರ್ಥಿಗಳ ಪಾಠ ಪ್ರಸಾರಕ್ಕೂ ಮುನ್ನ ಶಿಕ್ಷಕರುಗಳಿಗೆ ಮತ್ತು ಪೋಷಕರಿಗೆ ಅಗತ್ಯ ಮಾಹಿತಿ ನೀಡಲು ಮತ್ತು ಶಾಲಾ ಹಂತದಿಂದ ಜಿಲ್ಲಾ ಹಂತದವರೆಗಿನ ಅನುಷ್ಠಾನಾಧಿಕಾರಿಗಳು ವಹಿಸಬೇಕಾದ ಕ್ರಮ ಕುರಿತು ಮಾಹಿತಿ ನೀಡಲಾಗಿದೆ.

ಚಂದನ ವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಪ್ರತಿ ಅರ್ಧಗಂಟೆಗೆ ಒಂದು ವಿಷಯ ಬೋಧನೆ ಮಾಡಲಾಗುತ್ತದೆ. ದಿನವೊಂದಕ್ಕೆ ನಾಲ್ಕು ಗಂಟೆಯಲ್ಲಿ 8 ವಿಷಯಗಳನ್ನು ಪ್ರಸಾರ ಮಾಡಲಾಗುತ್ತದೆ. ಮೂರು ವಿಷಯಗಳ ಬೋಧನೆ ನಂತರ ಅರ್ಧಗಂಟೆ ವಿರಾಮ ನೀಡಲಾಗುತ್ತದೆ. 10 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ಒಂದೂವರೆ ಗಂಟೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ಗಂಟೆ ಪ್ರಸಾರ ಮಾಡಲಾಗುತ್ತದೆ.

ಪ್ರತಿ ದಿನ ಬೆಳಗ್ಗೆ 9.30 ರಿಂದ 11 ರವರೆಗೆ ಹಾಗೂ 11.30 ರಿಂದ 12 ಗಂಟೆವರೆಗೆ ತರಗತಿ ನಡೆಸಲಾಗುತ್ತದೆ. ನಂತರ ಮಧ್ಯಾಹ್ನ 3 ರಿಂದ 4.30 ಹಾಗೂ ಸಂಜೆ 5 ರಿಂದ 5.30 ರ ವರೆಗೆ ತರಗತಿಗಳನ್ನು ಪ್ರಸಾರ ಮಾಡಲಾಗುತ್ತದೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ