ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾರ್ಯ ತಿಳಿಸಿದರು.