TRENDING
Next
Prev

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ನೇಮಕ

ಮಂಗಳೂರು: ಬಿಜೆಪಿ ಮುಖಂಡ, ಬಿಲ್ಲವ ಸಮಾಜ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಲಿನಿ.ಕೆ ಹೆಗಡೆ ಅವರು ಸರ್ಕಾರದ ಪರವಾಗಿ ಆದೇಶ ಹೊರಡಿಸಿದ್ದು, 05/11/2022ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

READ ALSO

ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜೇಶ್ ನಾಯ್ಕ್ ಅವರು ಬಂಟ್ವಾಳ ಕ್ಷೇತ್ರದಲ್ಲಿ ಗೆಲುವು ಸಾಧಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಲ್ಲಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ ಹರಿಕೃಷ್ಣ ಬಂಟ್ವಾಳ ಅವರಿಗೆ ಬಸವರಾಜು ಬೊಮ್ಮಾಯಿ ರವರ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ನಿಗಮ ಹುದ್ದೆ ನೀಡಿದೆ.