Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 260 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 308 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 51 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 51 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ