ಬೆಳಕಿನ ಹಬ್ಬದಂದೆ ಪತ್ನಿಯ ಕೊಲೆ ಮಾಡಿ ಕೊಳ್ಳಿ ಇಕ್ಕಿದ ಭೂಪ! ಗ್ರಾ.ಪಂ ಸದಸ್ಯನಿಂದಲೇ ನಡೆಯಿತು ಹೇಯ ಕೃತ್ಯ!

ಮೈಸೂರು:  ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಂದೇ ಮೈಸೂರಿನಲ್ಲೊಂದು ಅಮಾನುಷ ಘಟನೆ ನಡೆದಿದೆ. ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು 30 ವರ್ಷದ ರಮೇಶ್ ಎಂಬಾತ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ.

READ ALSO

ದೊಡ್ಡಮುಲಗೂಡು ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದ ರಮೇಶ್ ತನ್ನ ಹೆಂಡತಿ 22 ವರ್ಷದ ಶಾಂತಮ್ಮನನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.