ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್ 20ರಿಂದ 29ರವರೆಗೆ ಡೆಹ್ರಾಡೂನ್‌ನಲ್ಲಿ ನಡೆದ 10 ದಿನಗಳ ಐಸ್ ಹಾಕಿ ರಾಜ್ಯ ಶಿಬಿರದಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಜೂನ್ ತಿಂಗಳ ಕೊನೆಯ ವಾರದಲ್ಲಿ ಡೆಹ್ರಾಡೂನ್‌ನಲ್ಲೇ ನಡೆಯಲಿರುವ ರಾಷ್ಟ್ರೀಯ ಐಸ್ ಹಾಕಿ ಟೂರ್ನಿಯಲ್ಲಿ 14 ವರ್ಷದೊಳಗಿನವರ ಕರ್ನಾಟಕ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ.

ಪ್ರಸ್ತುತ ಬೆಂಗಳೂರಿನ ಅಕ್ಷಯನಗರದಲ್ಲಿ ವಾಸವಾಗಿರುವ ನಿಷ್ಕ್ ಅವರು ಎಲೆಕ್ಟ್ರಾನಿಕ್ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಕೇಟಿಂಗ್ ಕೋಚ್ ಶೈಖ್ ಅಬ್ದುಲ್ ಮತ್ತು ಇನ್‌ಲೈನ್ ಹಾಕಿ ಕೋಚ್ ಅಶ್ವಿನ್ ಅವರ ಮಾರ್ಗದರ್ಶನದಲ್ಲಿ ಅವರು ತರಬೇತಿ ಪಡೆದಿದ್ದಾರೆ.

ನಿಷ್ಕ್ ಅವರ ಈ ಸಾಧನೆ ಕುತ್ಲೂರು ಗ್ರಾಮಕ್ಕೆ ಹೆಮ್ಮೆ ತಂದುಕೊಟ್ಟಿದೆ. ಅವರು ಪ್ರಗತಿಪರ ಕೃಷಿಕ ಸಮೃದ್ಧಿ ಡಾಕಯ್ಯ ಪೂಜಾರಿ ಅವರ ಮೊಮ್ಮಗನಾಗಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ