ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನ ದಳದಲ್ಲಿ ಕಳೆದ 10 ವರ್ಷ 25 ದಿನಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸಿ ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು. ಹಾಗೂ 22/02/2020 ರಂದು ನಡೆದ ಕರ್ತವ್ಯ ಕೂಟದಲ್ಲಿ ಬೆಳ್ಳಿಯ ಪದಕ ಪಡೆದು ಉಡುಪಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆಗೆ ಗೌರವವನ್ನು ತಂದು ಕೊಟ್ಟಿರುವ ಶ್ವಾನ ಐಕಾನ್ ಇಂದು ನಿವೃತ್ತಿ ಹೊಂದಿದ್ದು ಐಕಾನ್ ಶ್ವಾನವನ್ನು ಶ್ವಾನದಳ ಸಿಬ್ಬಂದಿ ಸಮ್ಮುಖದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕ ರವರು ಪ್ರಶಂಶಿಸಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.…