ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ, ಐವಿಎಫ್ (IVF) ಕೇಂದ್ರ ಸ್ಥಾಪಿಸುವುದು ಮುಂದಿನ ಗುರಿ: ಡಾ.ಗೋಪಾಲಕೃಷ್ಣ ಭಟ್

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, “ಇದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ಕ್ಷಣ. ಐಯುಐ ವಿಭಾಗವು ಇಲ್ಲಿನ ಜನರಿಗೆ ಅತ್ಯಂತ ಅಗತ್ಯವಾಗಿತ್ತು. ಇದು ಡಾ. ಗೋಪಾಲಕೃಷ್ಣ ಹಾಗೂ ಡಾ. ಭಾರತಿ ಜಿಕೆ ಅವರ ಕನಸಿನ ಫಲಿತಾಂಶವಾಗಿದೆ. ಐಯುಐ ಚಿಕಿತ್ಸೆಯ ಲಾಭಗಳ ಬಗ್ಗೆ ಇನ್ನೂ ಅನೇಕರು ತಿಳಿದುಕೊಂಡಿಲ್ಲ. ಈ ಸೇವೆ ತಾಲ್ಲೂಕಿನ ಜನರಿಗೆ ಬಹಳ ಸಹಕಾರಿಯಾಗಲಿದೆ” ಎಂದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಅವರು ಮಾತನಾಡಿ, ಬೆನಕ ಆಸ್ಪತ್ರೆಯಲ್ಲಿ ಐವಿಎಫ್ (IVF) ಕೇಂದ್ರ ಸ್ಥಾಪಿಸುವುದು ನನ್ನ ಮುಂದಿನ ದೊಡ್ಡ ಕನಸಾಗಿದೆ. ಪ್ರಸ್ತುತ ಐಯುಐ ವಿಭಾಗವನ್ನು ಪ್ರಾರಂಭ ಮಾಡಿದ್ದೇವೆ. ಇದೇ ಸಂದರ್ಭದಲ್ಲಿ ಡಾ. ನವ್ಯ ಭಟ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

ಡಾ. ಭಾರತಿ ಜಿಕೆ ಅವರು ಮಾತನಾಡಿ, “ಹಿಂದಿನ ದಿನಗಳಲ್ಲಿ ಬಂಜೆತನದ ಸಮಸ್ಯೆ ಇರುವ ಅನೇಕ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಹಾಗೂ ಬೆಂಗಳೂರಿಗೆ ಕಳುಹಿಸಬೇಕಾಗುತ್ತಿತ್ತು. ಈಗ ನಮ್ಮದೇ ಆಸ್ಪತ್ರೆಯಲ್ಲಿ ಐಯುಐ ಚಿಕಿತ್ಸೆ ಲಭ್ಯವಿರುವುದರಿಂದ ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ರೀರೋಗ ಹಾಗೂ ಐವಿಎಫ್ ತಜ್ಞೆಯಾದ ನವ್ಯ ಭಟ್ ಅವರು ಮಾತನಾಡಿ, ಐಯುಐ ಚಿಕಿತ್ಸೆಯ ಎಂಬುದು ಸರಳ ಹಾಗೂ ಸುರಕ್ಷಿತ ಚಿಕಿತ್ಸೆಯಾಗಿದೆ. ಬಂಜೆತನವಿರುವ ಮಹಿಳೆಯ ಪತಿಯ ಅರೋಗ್ಯಕರ ವೀರ್ಯವನನ್ನು ಆಯ್ಕೆ ಮಾಡಿ, ಸರಿಯಾದ ಸಮಯದಲ್ಲಿ ಪತ್ನಿಯ ಗರ್ಭಾಶಯದೊಳಗೆ ನೇರವಾಗಿ ಇಂಜೆಕ್ಷನ್ ಮೂಲಕ ಕೊಡಲಾಗುತ್ತದೆ. ಈ ವಿಧಾನದಿಂದ ಗರ್ಭಧಾರಣೆಯ ಸಾಧ್ಯತೆ ಹೆಚ್ಚಾಗುತ್ತದೆ.
ಯಾವುದೇ ನೋವಿಲ್ಲದೇ, ಕೆಲವೇ ಸಮಯಗಳನ್ನು ಪೂರ್ಣಗೊಳ್ಳುವ ಪ್ರಕ್ರಿಯೆಯಾಗಿದೆ. ಮುಖ್ಯವಾಗಿ ಬಂಜೆತನ ಸಮಸ್ಯೆ ಎದುರಿಸುತ್ತಿರುವ ದಂಪತಿಗಳು ಬೆನಕ ಆಸ್ಪತ್ರೆಗೆ ಬಂದು ಈ ಸೇವೆಯನ್ನು ಬಳಸಿಕೊಳ್ಳಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತುರ್ತುಚಿಕಿತ್ಸಾ ವೈದ್ಯರಾದ ಡಾ. ಆದಿತ್ಯ ರಾವ್, ಸ್ತ್ರೀರೋಗ ತಜ್ಞೆ ಹಾಗೂ ಕೀರಂಧ್ರ ಶಸ್ತçಚಿಕಿತ್ಸೆ ತಜ್ಞರಾದ ಡಾ. ಅಂಕಿತಾ ಜಿ ಭಟ್ , ಆಸ್ಪತ್ರೆಯ ಜನರಲ್ ಮ್ಯಾನೇಜರ್ ಶ್ರೀ ದೇವಸ್ಯ ವರ್ಗೀಸ್ ಉಪಸ್ಥಿತರಿದ್ದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಎಸ್. ಜಿ. ಭಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 20 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ