ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾವೂರು ಗ್ರಾಮದ ನಿರಿಂದಿ ಮನೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್ ಸ್ವಾಲಿ ( 26 ವರ್ಷ), ಲಾಯಿಲ ಗ್ರಾಮದ ಕುಂಟಿನಿ ಮನೆ ಅಬ್ಬಾಸ್ ಎಂಬರ ಪುತ್ರ ಯಾಹ್ಯಾ ( 32 ವರ್ಷ), ನಾವೂರು ಗ್ರಾಮದ ಕಿರ್ನಡ್ಕ ನಿವಾಸಿ ಹುಸೈನ್ ಎಂಬವರ ಪುತ್ರ ಬಿ.ಹೆಚ್ ನೌಫಲ್ (27 ವರ್ಷ) ಬಂಧಿತ ಆರೋಪಿಗಳು.

ಅ.31 ರಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಐದು ಪವನಿನ ಚಿನ್ನದ ಚೈನ್ 1, ಒಂದು ವವನಿನ ಚಿನ್ನದ ಸಣ್ಣ ಚೈನ್ 1, ಮಕ್ಕಳ ಚೈನ್ 2, ತಲಾ ಒಂದು ಒಂದು ವವನಿನ ಚಿನ್ನದ ಕಾಯಿನ್ಸ್ 4 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕಟ್ 4, ಎರಡು ವವನಿನ ಚಿನ್ನದ ಗಟ್ಟಿ 1, 13ಪವನಿನ ಚಿನ್ನದ ನೆಕ್ಲೀಸ್ 1, ಒಂದು ಒಂದೂವರೆ ಪವನಿನ ಚಿನ್ನದ ವವನಿನ ಚಿನ್ನದ ತುಂಡಾದ ಬಳ ಹಾಗೂ ಪೆಂಡೆಂಟ್ 1, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 1, ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ 1, ಸೇರಿದಂತೆ ಸುಮಾರು 12,05,200ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದು, ಈ ಬಗ್ಗೆ ಮಹಮ್ಮದ್ ರವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತೀವ್ರ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇಂದಬೆಟ್ಟು ಗ್ರಾಮಕ್ಕೆ ಅಂದು ಬಂದ ಅಪರಿಚಿತರ ಮಾಹಿತಿ ಕಲೆ ಹಾಕಿದಾಗ ಬೈಕ್‌ನಲ್ಲಿ ಹೆಲ್ಮೆಟ್ ಹಾಕಿ ಇಬ್ಬರು ಬಂದಿರುವ ಮಾಹಿತಿ ಲಭಿಸಿತು. ಇದರ ಬಗ್ಗೆ ಸಿಸಿ ಟಿ.ವಿ ಹಾಗೂ ಇತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಇದೀಗ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನೆ ಋಷಿಕೇಶ್ ಭಗವಾನ್, ಶಿವಕುಮಾರ್ ಗುಣಾರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ, ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷರು ರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ,ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಪಾಲ್ಗೊಂಡಿದ್ದರು.

ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಅಲ್ಟೊ ಕಾರು, ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,96,500 ರೂ.ಗಳು, ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 12,75,930ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರಿಗೆ ದ.ಕ ಜಿಲ್ಲಾ ಎಸ್.ಪಿ ಯವರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 35 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 94 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 215 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 39 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 28 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 24 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ