ಬ್ರಿಸ್ಬೇನ್‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.
ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ ಗುರಿ ಪಡೆದಿತ್ತು. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು.
ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್‌ನಲ್ಲಿ 369 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 294 ರನ್ ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಗಳಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್‌ನಲ್ಲಿ 329 ರನ್ ಬಾರಿಸಿ ಜಯ ತನ್ನದಾಗಿಸಿಕೊಂಡಿತು.
ಕಳೆದ ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದಿದ್ದ ಭಾರತ ಈ ಬಾರಿಯೂ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿ ಟ್ರೋಫಿ ಉಳಿಸಿಕೊಂಡಿದೆ.