ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಅಧಿಕೃತವಾಗಿ ಬಿ.ಜೆ.ಪಿ ಗೆ ಸೇರ್ಪಡೆ

ನವದೆಹಲಿ : ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ತಮಿಳುನಾಡು ಮೂಲದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶ ಮಾಡಿದ್ದು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.

ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ಶಾಲು ಹೊದಿಸಿ, ಸೇರ್ಪಡೆ ಆದೇಶ ನೀಡುವ ಮೂಲಕ ಮುರುಳೀಧರ್ ರಾವ್, ಅವರನ್ನು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿಕೊಂಡರು. ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದೆ.

ಬಿಜೆಪಿ ಸೇರ್ಪಡೆಗೊಂಡ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಸಾರ್ವಜನಿಕರ ಸೇವೆ ಮಾಡುವ ಸಂಬಂಧ ರಾಜಕೀಯಕ್ಕೆ ಸೇರಿದ್ದೇನೆ. ಮುಂದೆಯೂ ಪೊಲೀಸ್ ವೃತ್ತಿಯಲ್ಲಿ ಮಾಡಿದಂತೆ ರಾಜಕೀಯವಾಗಿಯೂ ಜನರ ಸೇವೆ ಮಾಡಲಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಮುರುಳೀಧರ್ ರಾವ್, ಸಂಬಿತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಭಾಗವಹಿಸಿದ್ದರು.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 136 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 67 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು