ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು!

ಮುಂಬೈ: ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರಲ್ಲಿಯೂ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮೊದಲು ಸ್ವಯಂ ಕ್ವಾರಂಟೈನ್‌ನಲ್ಲಿ ಇದ್ದರು. ಇದೀಗ ಇಬ್ಬರಿಗೂ ಕರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಶ್ವರ್ಯ ರೈ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

READ ALSO

ಇಗಾಗಲೇ ನಟರಾದ ಅಮಿತಾಭ್‌ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಅವರಿಗೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜುಲೈ 12 ರಂದು ಅಭಿಷೇಕ್ ಟ್ವೀಟ್ ಮಾಡುವ ಮೂಲಕ ಐಶ್ವರ್ಯ ಮತ್ತು ಆರಾಧ್ಯ ಅವರಿಗೂ ಕರೊನಾ ಪಾಸಿಟಿವ್‌ ಬಂದಿದ್ದು, ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದಿದ್ದರು. ತಮ್ಮ ತಾಯಿ ಸೇರಿದಂತೆ ಕುಟುಂಬದ ಉಳಿದವರಿಗೆ ಸೋಂಕು ತಗುಲಿಲ್ಲ ಎಂದೂ ಅವರು ಹೇಳಿದ್ದರು.

ಅಮಿತಾಭ್‌ ಮತ್ತು ಅಭಿಷೇಕ್‌ ಬಚ್ಚನ್‌ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎನ್ನಲಾಗಿದೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA