ಶ್ರೀನಗರ: ಇಲ್ಲಿನ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಇಂದು ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೈಲಟ್ ಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತನಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.