ಕುಂದಾಪುರ: ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ. ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದಲ್ಲದೆ, ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.