ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ಭಾನುವಾರ ದಾಳಿ ನಡೆಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ. ಆರಂಭಿಕ ವರದಿಗಳನ್ನು ಉಲ್ಲೇಖಿಸಿ, ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಶಿವಖೋರಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಅದೇ ಭಯೋತ್ಪಾದಕರ ಗುಂಪು ಈ ದಾಳಿ ನಡೆಸಿದೆ ಎಂದು ತಿಳಿಸಿದೆ.
ದಾಳಿಯ ಮಾಹಿತಿ ಪಡೆದ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.