ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ನಡೆಸುವಂತೆ ಕಾರ್ಯಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದ ಜನರ ಸಂಕಷ್ಟವನ್ನು ಅರಿಯಲು ಹಾಗೂ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮಹತ್ವರದ ತೀರ್ಮಾನಕ್ಕೆ ಬಂದಿದ್ದು ಇನ್ನು ಮುಂದಿನ ದಿನಗಳಲ್ಲಿ 15ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಮಟ್ಟದಲ್ಲೇ ಜನರ ಸಮಸ್ಯೆಗಳನ್ನು ಆಲಿಸಿಲು ವ್ಯವಸ್ಥೆ ರೂಪಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ: 25-09-2023 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತ ಸೂಚಿಸಿರುತ್ತಾರೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದೆ.

ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ (PGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು, ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಡೆಸುವುದು.

Spread the love
  • Related Posts

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ…

    Spread the love

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.…

    Spread the love

    You Missed

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 37 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 133 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 70 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    • By admin
    • November 17, 2024
    • 50 views
    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    • By admin
    • November 14, 2024
    • 56 views
    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 57 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ