ಬೆಂಗಳೂರು: ಕೊರೋನಾ ಸಮಸ್ಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 1 2021ರಿಂದ ಪುನರಾರಂಭಿಸಲು ಸರಕಾರ ಮುಂದಾಗಿದೆ.
ಜನವರಿ 1ರಿಂದ 10ನೆತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ.
ಜನವರಿ 1ರಿಂದ 10 ಮತ್ತು 12ನೇ ತರಗತಿ ಆರಂಭಿಸಲಾಗುತ್ತಿದೆ. ಜನವರಿ 1ರಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಳಿಗೆ ವಿದ್ಯಾಗಮ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆಸಲು ನಿರ್ಧರಿಸಿದ್ದಾರೆ. ಈ ಮೂಲಕ ಜನವರಿ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ.