ಜನೀಶ್ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ! ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಹಾಯಕ್ಕೆ ಮನವಿ

ಬೆಂಗಳೂರು: 11 ತಿಂಗಳ ಕಂದಮ್ಮನನ್ನು ಕಾಡುತ್ತಿರುವ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಗೆ ಚಿಕಿತ್ಸೆಗಾಗಿ 16 ಕೋಟಿ ರೂ. ಇಂಜಕ್ಷನ್ ಅಗತ್ಯವಿದ್ದು, ಈ ಚುಚ್ಚು ಮದ್ದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡಿದ್ದು, ಔಷಧದ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನ ಮಾಡುವಂತೆಯೂ ಕೋರಿದ್ದಾರೆ.

READ ALSO

ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಜೆ.ಸಿ.ಚಂದ್ರಶೇಖರ್ ಪತ್ರದ ಪ್ರತಿ ರವಾನಿಸಿದ್ದಾರೆ.