ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

ಸಕಲೇಶಪುರ, ಜು.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ.) ವತಿಯಿಂದ ಹೆಗ್ಗದ್ದೆ ವಲಯದ ಹಾನುಬಾಳ್ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಡಾ. ನಿಶ್ಚಯ್ ಎಚ್.ಎನ್. ಉದ್ಘಾಟಿಸಿ ಮಾತನಾಡಿದರು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದ ಅವರು, ಪ್ರತಿಯೊಬ್ಬರೂ ದೈನಂದಿನ ಆಹಾರದಲ್ಲಿ ಸಮತೋಲಿತ ಪೌಷ್ಟಿಕಾಂಶಗಳನ್ನು ಒಳಗೊಂಡ ಆಹಾರವನ್ನು ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಿರಿಧಾನ್ಯಗಳು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು, ಹಾಲು, ಮೊಟ್ಟೆ, ಬೇಳೆಕಾಳುಗಳು ಸೇರಿದಂತೆ ಸ್ಥಳೀಯವಾಗಿ ದೊರೆಯುವ ಪೌಷ್ಟಿಕ ಆಹಾರಗಳನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ, ರೋಗನಿರೋಧಕ ಶಕ್ತಿ ಹೆಚ್ಚಳ ಹಾಗೂ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನೂ ನಡೆಸಲಾಯಿತು.

ಈ ಸಂದರ್ಭದಲ್ಲಿ ಹಾನುಬಾಳು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಅವರು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿದರು. ವೈಯಕ್ತಿಕ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅತ್ಯಗತ್ಯವಾಗಿದ್ದು, ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ವಿಂಗಡಿಸಿ ವಿಲೇವಾರಿ ಮಾಡುವುದು, ಶುದ್ಧ ಕುಡಿಯುವ ನೀರನ್ನು ಬಳಸುವುದು, ಶೌಚಾಲಯಗಳ ಬಳಕೆಯನ್ನು ಕಡ್ಡಾಯಗೊಳಿಸುವುದು ಹಾಗೂ ಸಾಂಕ್ರಾಮಿಕ ರೋಗಗಳ ತಡೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಮೈಸೂರು ಪ್ರಾದೇಶಿಕ ಕಚೇರಿಯ ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಮೂಕಾಂಬಿಕ ಅವರು ಜ್ಞಾನವಿಕಾಸ ಕಾರ್ಯಕ್ರಮಗಳು, ಮಹಿಳೆಯರ ಆರೋಗ್ಯ ಹಾಗೂ ಯೋಜನೆಯ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಯೋಜನಾಧಿಕಾರಿ ರಾಜೇಶ್ ಎಂ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಹಾನುಬಾಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸಂತೋಷ್ ಕುಮಾರ್, ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ಸೇವಾಪ್ರತಿನಿಧಿಗಳು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 15 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ