BIG BREAKING NEWS : ಏ.27ರಿಂದ ಆರಂಭಗೊಳ್ಳಲಿದ್ದ ‘ಜೆಇಇ ಮುಖ್ಯ ಪರೀಕ್ಷೆ’ ಮುಂದೂಡಿಕೆ

ನವದೆಹಲಿ : ಏಪ್ರಿಲ್ 27, 28 ಮತ್ತು 30ರಂದು ನಡೆಸಲು ನಿರ್ಧರಿಸಲಾಗಿದ್ದಂತ ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.

ಈ ಕುರಿತಂತೆ ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಳ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ, ಜೆಇಇ ಮುಖ್ಯ ಪರೀಕ್ಷೆ 2021 ಅನ್ನು ಮುಂದೂಡಿಕೆ ಮಾಡಲಾಗುತ್ತಿದೆ.

READ ALSO

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಂಡಿದ್ದು, ಮುಂದೂಡಿಕೆ ಮಾಡಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.