ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಆರ್ ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಡಿಎನ್ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಿದರು.ಜೀವರಾಜ್ ಅವರು ಶೃಂಗೇರಿಯ ಶಾರದಾಂಬೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

2023ರ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಟಿ ಡಿ ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋತಿದ್ದ ಜೀವರಾಜ್ ಅವರು ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ನಂತರ ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆ ಮಾಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದ್ದು, ಇದರಿಂದ ಫಲಿತಾಂಶದಲ್ಲಿ ಮಹತ್ತರ ಬದಲಾವಣೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದು ಅಂತಿಮವಾಗಿ ಜಯಗಳಿಸಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 3 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 10 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ