ಶಿವಮೊಗ್ಗ : ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬನನ್ನು ರಕ್ಷಿಸಿದ ಘಟನೆ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಬುಧವಾರ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬೆಂಗಳೂರು ಮೂಲದ ಚೇತನ್ ಎಂದು ಗುರುತಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮ ಮಾಡಿಕೊಂಡಿದ್ದ ಚೇತನ್ ಕಳೆದ 6 ತಿಂಗಳಿಂದ ಲಾಕ್ ಡೌನ್ ಆದ ಪರಿಣಾಮ ಕೆಲಸ ಇಲ್ಲದೆ ಮನೆಯಲ್ಲೇ ಇದ್ದು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಬುಧವಾರ ಬ್ರಿಟಿಷ್ ಬಂಗ್ಲೋ ಬಳಿಯಿಂದ ಜೋಗ ಜಲಪಾತದ ತುತ್ತ ತುದಿಗೆ ತೆರಳಿದ್ದ ಇದನ್ನು ಗಮನಿಸಿದ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದೀಗ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.