ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿನಾಯಿತಿ:
ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ
ಮಾಧ್ಯಮ ಸಂಸ್ಥೆ , ಬ್ಯಾಂಕ್ , ವಿಮೆ ಕಚೇರಿ ಎಲ್ಲಾ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆ ವಿನಾಯಿತಿ
ಇ – ಕಾಮರ್ಸ್ ಮೂಲಕ ಆಹಾರ, ಔಷಧಿ, ವೈದ್ಯಕೀಯ ಸರಬರಾಜಿಗೆ ಅವಕಾಶ.
ಈಗಾಗಲೇ ನಿಗದಿಯಾಗಿರುವ ವಿಮಾನ – ರೈಲು ಪ್ರಯಾಣಕ್ಕೆ ಪ್ರಯಾಣಿಕರಿಗೆ ಅವಕಾಶ ಶಾಲೆ , ಕೊಚಿಂಗ್ ಶಾಪಿಂಗ್ ಮಾಲ್ ಹೊಟೇಲ್ , ಧಾರ್ಮಿಕ, ಸಾಮಾಜಿಕ ಸಮಾರಂಭಕ್ಕೆ ನಿಷೇಧ, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಬೇಕು ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ.
ಒಂದು ವೇಳೆ ಕೊವೀಡ್ ನಿರ್ವಹಣೆಯ ಲಾಕ್ ಡೌನ್ ಕ್ರಮಗಳನ್ನು ಉಲ್ಲಂಘಿಸಿದರೆ, ಯಾವುದೇ ವ್ಯಕ್ತಿಯ ವಿರುದ್ದ ವಿಪತ್ತು ನಿರ್ವಹಣೆಯ ಕಾಯ್ದೆ , ಹಾಗೂ ಭಾರತೀಯ ದಂಡ ಸಂಹಿತೆ 188 ಅಡಿಯಲ್ಲಿ ಕಾನೂನು ಕ್ರಮ ಜರಗಿಸುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ.
ಆದೇಶದಲ್ಲಿ ನೀಡಲಾಗಿರುವ ಲಾಕ್ ಡೌನ್ ಮಾರ್ಗಸೂಚಿಗಳ ಸಂಪೂರ್ಣ ಚಿತ್ರಣ ಇಲ್ಲಿದೆ: