ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈಗಿರುವ ಲಾಕ್ ಡೌನ್ ಮೇ 24 ಕ್ಕೆ ಕೊನೆಯಲಾಗಿತ್ತು. ಆದರೆ ಅದರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಲಾಕ್ ಡೌನ್ ಜಾರಿಯಾದಾಗಿನಿಂದ ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ ಮತ್ತೆ ಲಾಕ್ ಡೌನ್ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.
ಮುಂದಿನ 14 ದಿನಗಳ ಕಾಲ ಬೆಂಗಳೂರು ಹಾಗೂ ರಾಜ್ಯದಾದ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗ್ಗೆ 10 ಗಂಟೆಯ ವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ. 9.45ರ ಒಳಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಬೇಕು. ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸರಿಗೆ ಪುಲ್ ಪವರ್ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.