ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಫೆಂಗಲ್‌ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ. Spread the love

    Spread the love

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ…

    Spread the love

    You Missed

    ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • December 2, 2024
    • 56 views
    ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    • By admin
    • November 27, 2024
    • 114 views
    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    • By admin
    • November 25, 2024
    • 28 views
    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    • By admin
    • November 25, 2024
    • 27 views
    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 57 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 154 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ