ಕಂಬಳ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ

ಮಂಗಳೂರು: ಬೆಳ್ತಂಗಡಿ ತಾಲೂಕಿನ ವೇಣೂರು–ಪೆರ್ಮುಡದಲ್ಲಿ ಶನಿವಾರ ನಡೆದ ಸೂರ್ಯ–ಚಂದ್ರ ಜೋಡುಕರೆ ಕಂಬಳದಲ್ಲಿ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಹೊಸ ದಾಖಲೆ ಬರೆದಿದ್ದಾರೆ. 8.96 ಸೆಕೆಂಡ್‌ನಲ್ಲಿ 100 ಮೀಟರ್‌ ಕ್ರಮಿಸುವ ಮೂಲಕ ಇದುವರೆಗಿನ ಎಲ್ಲ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

ಕಂಬಳದ 125 ಮೀಟರ್‌ ಉದ್ದದ ಕರೆಯನ್ನು 11.21 ಸೆಕೆಂಡ್‌ನಲ್ಲಿ ಶ್ರೀನಿವಾಸಗೌಡ ತಲುಪಿದ್ದಾರೆ. ಇದನ್ನು 100 ಮೀಟರ್‌ಗೆ ಲೆಕ್ಕ ಹಾಕಿದಾಗ 8.96 ಸೆಕೆಂಡ್‌ ಸಮಯ ತೆಗೆದುಕೊಂಡಿದ್ದಾರೆ. ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲ್ ಪಾಣಿಲ ಬಾಡ ಪೂಜಾರಿ ಅವರ ಕೋಣಗಳನ್ನು ಶ್ರೀನಿವಾಸ ಗೌಡ ಓಡಿಸಿದ್ದಾರೆ.

ಈ ಮೊದಲು ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಇದೇ ಶ್ರೀನಿವಾಸ ಗೌಡ 100 ಮೀಟರ್‌ ಅನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ 100 ಮೀಟರ್‌ ಅನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಬೈಂದೂರು ವಿಶ್ವನಾಥ ದೇವಾಡಿಗ ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ, ಹೊಸ ದಾಖಲೆ ಬರೆದಿದ್ದರು. ಇದೀಗ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    You Missed

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 4 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 4 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 14 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!