ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಗ್ರಾಮಪಂಚಾಯತ್ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣಗೊಂಡಿದ್ದ ಹಿಂದೂ ರುದ್ರಭೂಮಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮನುಷ್ಯನ ಅಂತ್ಯದ ಸಮಯದಲ್ಲಿ ಅದರಲ್ಲೂ ಮಳೆಗಾಲದ ಸಮಯದಲ್ಲಿ ಅಂತ್ಯಕ್ರಿಯೆ ಮಾಡಲು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಮುಕ್ತಿದಾಮ ನಿರ್ಮಾಣ ಆಗುತ್ತಿರುವುದು ಸಾರ್ವಜನಿಕರಿಗೆ ಬಹಳಷ್ಟು ಸಹಕಾರಿಯಾಗಿದೆ. ಮುಕ್ತಿದಾಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವ ಹಾಗೂ ಭದ್ರತಾ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಯೂ ಇದೆ ಮುಂದಿನ ದಿನಗಳಲ್ಲಿ ಈ ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕವೂ ಇಂತಹ ಕಾರ್ಯಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಮಾತನಾಡಿ ಕಳೆದ ಕೆಲವು ವರ್ಷಗಳಿಂದ ಗ್ರಾಮದಲ್ಲಿ ರುದ್ರಭೂಮಿ ಭೂಮಿಯ ಸಮಸ್ಯೆ ಮನಗೊಂಡು ಸ್ಥಳೀಯವಾಗಿ ಚರ್ಚಿಸಿದಾಗ ರುದ್ರಭೂಮಿ ನಿರ್ಮಾಣದ ಬಗ್ಗೆ ಸ್ಥಳೀಯರು ಆಸಕ್ತಿ ವಹಿಸಿದ್ದು ಸುಮಾರು 7.20ಲಕ್ಷ ವೆಚ್ಚದಲ್ಲಿ ಮೊದಲ ಕಾಮಗಾರಿ ಪೂರ್ಣಗೊಂಡಿದ್ದು ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು 2.60ಲಕ್ಷ ವೆಚ್ಚದ ಸಹಾಯಹಸ್ತ ದೊರಕ್ಕಿದ್ದು ಸಾರ್ವಜನಿಕರಿಗೆ ದಹನ ಕ್ರಿಯೆಗೆ ಅನುಕೂಲ ಆಗುವಂತೆ ರುದ್ರಭೂಮಿ ನಿರ್ಮಾಣವಾಗಿದೆ ಮುಂದಕ್ಕೂ ಸಾರ್ವಜನಿಕರೂ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದ್ದು ಎಲ್ಲರೂ ಕೈಜೋಡಿಸುವ ಮೂಲಕ ಸ್ವಚ್ಛ ನೈರ್ಮಲ್ಯ ಮಾದರಿ ರುದ್ರಭೂಮಿ ಆಗಲಿ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಾವಿತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಸೂರಜ್ , ಸ್ಥಳೀಯರಾದ ಪ್ರಭಾಕರ ಶೆಣೈ, ಕಿಶೋರ್ ಕುರುಡ್ಯ, ಆನಂದ ಗೌಡ ಬರೆಮೇಲು, ರಾಘವೇಂದ್ರ ಭಟ್, ರೇಣುಕಾ, ಹೇಮಾವತಿ, ಚಂದ್ರಾವತಿ, ಸಂಜೀವ ಗೌಡ ನೂಜಿ, ರಶ್ಮಿ, ಶ್ರೀನಿವಾಸ ಗೌಡ, ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು